Vidyasiri Scholarship 2025: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ.
ಈಗ ನಮ್ಮ ರಾಜ್ಯದಲ್ಲಿ ಇರುವ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಕಾಲೇಜು ನಲ್ಲಿ ಮೆಟ್ರಿಕ್ ನಂತರದ ವರ್ಷದಲ್ಲಿ ವ್ಯಾಸಂಗ ಮಾಡುವ ಪ್ರತಿಯೊಂದು ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈಗ 2025 26 ನೇ ಸಾಲಿನಲ್ಲಿ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದೆ.
ಈಗ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವಂತಹ ಒಂದು ಯೋಜನೆಯಾಗಿದೆ. ಈ ಒಂದು ಯೋಜನೆಯಲ್ಲಿ ಆಯ್ಕೆ ಆದಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿನಂತ 1500 ನಂತೆ 10 ತಿಂಗಳ ಒಟ್ಟು ವಾರ್ಷಿಕವಾಗಿ 15000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಹಾಗಿದ್ದರೆ ಈಗ ಯಾರೆಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂಬುದರ ಸಂಪೂರ್ಣ ಮಾಹಿತಿ ಈಗ ಇದರಲ್ಲಿ ಇದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನು?
- ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಅದೇ ರೀತಿಯಾಗಿ ವಿದ್ಯಾರ್ಥಿಗಳ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಹೊಂದಿರಬೇಕು.
- ಅದೇ ರೀತಿಯಾಗಿ ಪ್ರವರ್ಗ ಒಂದು ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಕುಟುಂಬದ ಆದಾಯವು 2.50 ಲಕ್ಷದ ಒಳಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ವಿದ್ಯಾರ್ಥಿಗಳು ಹಳ್ಳಿ ಅಥವಾ ಗ್ರಾಮೀಣ ಪ್ರದೇಶದಿಂದ ಬಂದಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಅಷ್ಟೇ ಅಲ್ಲದೆ ವಿದ್ಯಾರ್ಥಿಗಳ ಹಾಸ್ಟೆಲ್ ಪಿಜ್ಜೆಗಳಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯನ್ನು ಹೊಂದಿದ್ದರೂ ಕೂಡ ಅಂಥವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಹಿಂದುಳಿದ ವರ್ಗಗಳಿಗೆ ಆರ್ಥಿಕ ಬೆಂಬಲವನ್ನು ನೀಡುವ ಉದ್ದೇಶದಿಂದ ಈ ಒಂದು ಮೇಲ್ಕಾಣಿಸಿದ ಅರ್ಹತೆಗಳನ್ನು ಹೊಂದಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಅವರು ಕೂಡ ವಿದ್ಯಾಭ್ಯಾಸ ಸುಗಮವಾಗಿ ಮುಂದುವರಿಸಿಕೊಂಡು ಹೋಗಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪೋಷಕರು ಅಥವಾ ಪಾಲಕರ ಆಧಾರ್ ಕಾರ್ಡ್
- ಇಂದಿನ ಮಾರ್ಕ್ಸ್ ಕಾರ್ಡ್ ಗಳು
- ಶಾಲಾ id ಕಾರ್ಡ್
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವು ಕೂಡ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ನಾವು ಈ ಮೇಲೆ ತಿಳಿಸಿರುವ ಅರ್ಹತೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಹಾಗೆ ನಾವು ಈ ಮೇಲೆ ತಿಳಿಸಿರುವ ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ, ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು.
ಹಾಗೆಯೇ ದಿನನಿತ್ಯ ಇದೇ ತರದ ಹೊಸ ಹೊಸ ವಿದ್ಯಾರ್ಥಿ ವೇತನಗಳು ಮತ್ತು ಹೊಸ ಹೊಸ ಹುದ್ದೆಗಳ ಬಗ್ಗೆ ಹಾಗೆಯೇ ಸರ್ಕಾರದ ಕಡೆಯಿಂದ ಬರುವಂತಹ ಯೋಜನೆಗಳ ಅಪ್ಡೇಟ್ ಗಳ ಬಗ್ಗೆ ಕೂಡ ದಿನನಿತ್ಯವೂ ಮಾಹಿತಿ ತಿಳಿಯಬಹುದು.