Gruhalakshmi: ಗೃಹಲಕ್ಷ್ಮಿ ಯೋಜನೆ 21ನೇ ಕಂತಿನ ಬಿಡುಗಡೆ ದಿನಾಂಕ ಫಿಕ್ಸ್! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
Gruhalakshmi ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯಲ್ಲಿ ಇದುವರೆಗೆ ಸುಮಾರು 20ನೇ ಕಂತುಗಳ ತನಕ ಎಲ್ಲ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣವನ್ನು ಸರ್ಕಾರದ ಕಡೆಯಿಂದ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಆದರೆ ಸ್ನೇಹಿತರೆ ಈಗ ಎಲ್ಲಾ ಫಲಾನುಭವಿಗಳು ಕಾಯುತ್ತಿರುವುದು 21ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ. 20ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಿ ಸುಮಾರು ಒಂದು ತಿಂಗಳು ಕಳೆದರೂ ಸಹ ಇನ್ನೂ ಕೂಡ 21ನೇ ಕಂತಿನ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗಳಿಗೆ ಸರ್ಕಾರದ ಕಡೆಯಿಂದ ಬಿಡುಗಡೆ ಮಾಡಿಲ್ಲ.
ಇದೀಗ 21ನೇ ಕಂತಿನ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಹೊಸ ಮಾಹಿತಿಯನ್ನು ಮಾಧ್ಯಮಗಳ ಮುಂದೆ ನೀಡಿದ್ದಾರೆ. ಹೌದು ಸ್ನೇಹಿತರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತಹ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು 21ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ 2000 ಸಾವಿರ ರೂಪಾಯಿ ಹಣ ಬಿಡುಗಡೆ ಮಾಡುವ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಈ ಹಿಂದೆ ನಾವು ಜೂನ್ 8ನೇ ತಾರೀಕನಿಂದ 20ನೇ ಕಂತಿನ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಬಿಡುಗಡೆ ಮಾಡಿದ್ದೆವು. ಆದರೆ ಈಗ ಸ್ವಲ್ಪ ಸಮಸ್ಯೆಗಳಾದ ಕಾರಣ 21ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ತಡವಾಗಿದೆ ಎಂದು ಹೇಳಿದ್ದಾರೆ. ಅದೇ ರೀತಿ 21ನೇ ಕಂತಿನ ಹಣ ಬಿಡುಗಡೆ ಮಾಡುವ ದಿನಾಂಕವನ್ನು ಕೂಡ ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ.

21ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ ದಿನಾಂಕ!
ಗೃಹಲಕ್ಷ್ಮಿ ಯೋಜನೆ ಯಲ್ಲಿ ಇದುವರೆಗೆ ಒಟ್ಟಾರೆಯಾಗಿ ಸುಮಾರು ₹40,000 ಸಾವಿರ ರೂಪಾಯಿಗಳನ್ನು ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗಳಿಗೆ ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಬಿಡುಗಡೆ ಮಾಡಲಾಗಿದೆ. ಇದೀಗ ಮುಂದಿನ 21ನೇ ಕಂತಿನ ಹಣವನ್ನು ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಬಿಡುಗಡೆ ಮಾಡುವುದು ಬಾಕಿ ಇದೆ. ಇದೀಗ ಹಣಕಾಸು ಇಲಾಖೆ ಕಡೆಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 21ನೇ ಕಂತಿನ ಹಣ ವರ್ಗಾವಣೆಯಾಗಿದ್ದು. ಈಗ ಕೇವಲ ಎಲ್ಲಾ ಮಹಿಳೆಯರ ಖಾತೆಗಳಿಗೆ DBT ಮೂಲಕ 21ನೇ ಕಂತಿನ 2,000 ಹಣವನ್ನು ಬಿಡುಗಡೆ ಮಾಡುವುದಷ್ಟೇ ಬಾಕಿ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಣೆ ನೀಡಿದ್ದಾರೆ.
ಅದೇ ರೀತಿ 21ನೇ ಕಂತಿನ ಹಣ ಇದೇ ಜುಲೈ ತಿಂಗಳ 25ನೇ ತಾರೀಖಿನಿಂದ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘೋಷಿಸಿದ್ದಾರೆ. ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು 21ನೇ ಕಂತಿನ ರೂ.2000 ಹಣಕ್ಕಾಗಿ ಕಾಯ್ತಾ ಇದ್ದೀರೋ ಅಂತಹ ಎಲ್ಲಾ ಫಲಾನುಭವಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಗುಡ್ ನ್ಯೂಸ್ ಅನ್ನು ನೀಡಿದ್ದಾರೆ ಅಂತ ಹೇಳಬಹುದು. ಇನ್ನು ಕೆಲವೇ ದಿನಗಳಲ್ಲಿ 21ನೇ ಕಂತಿನ ಗೃಹಲಕ್ಷ್ಮಿ ಹಣ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಲಿದೆ.