HDFC Parivartana Scholarship For All Students: HDFC ಬ್ಯಾಂಕ್ ನ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! 15,000 ದಿಂದ 75,000 ಸಾವಿರದವರೆಗೆ ವಿದ್ಯಾರ್ಥಿ ವೇತನ!
ಈಗ 2025 26 ನೇ ಸಾಲಿನಲ್ಲಿ ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್ಷಿಪ್ ಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಯಾರೆಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹರಿದ್ದೀರೋ ಆ ಒಂದು ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಈಗ ಸದರಿ ಶೈಕ್ಷಣಿಕ ಸಾಲಿನ 1ನೇ ತರಗತಿಯಿಂದ ವೃತ್ತಿಪರ ಸ್ನಾತಕೋತ್ತರ ಪದವಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಈಗ ಪಡೆಯಬಹುದು.
ಅದೇ ರೀತಿಯಾಗಿ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ಈಗ 15,000 ದಿಂದ 75,000 ಸಾವಿರದವರೆಗೆ ಆರ್ಥಿಕವಾಗಿ ನೆರವು ದೊರೆಯುತ್ತದೆ. ಈಗ ಯಾರೆಲ್ಲಾ ಅರ್ಹ ಇದ್ದಿರೋ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಇದೇ ತರದ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ.
ಅರ್ಹತೆಗಳು ಏನು?
- ವಿದ್ಯಾರ್ಥಿ ವೇತನದ ಪಡೆಯುವಂತಹ ವಿದ್ಯಾರ್ಥಿಗಳು ಭಾರತೀಯ ಪ್ರಜೆಗಳು ಆಗಿರಬೇಕು.
- ಆನಂತರ ವಿದ್ಯಾರ್ಥಿಗಳು 1 ರಿಂದ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
- ಹಾಗೆಯೇ ಡಿಪ್ಲೋಮಾ, ಐಟಿಐ, ಪಾಲಿಟೆಕ್ನಿಕ್, ಗ್ರಾಜುಯೇಟ್ ಹಾಗೂ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.
- ಹಾಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು.
- ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಅದೇ ರೀತಿಯಾಗಿ ಸ್ನೇಹಿತರೆ ಈಗ ತಮ್ಮ ಶಿಕ್ಷಣದ ವೆಚ್ಚವನ್ನು ಭರಿಸಲು ಆಗದೆ ಇರುವಂತಹ ಶಾಲಾ ಕಾಲೇಜುತೊರೆಯುವ ಸ್ಥಿತಿಯಲ್ಲಿರುವವರನ್ನು ಈಗ ಉತ್ತೇಜಿಸಲು ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗಿದೆ. ಈಗ ಯಾರೆಲ್ಲಾ ವಿದ್ಯಾಭ್ಯಾಸವನ್ನು ಮಾಡುತ್ತಿದ್ದೀರಾ ಅಂತವರು ಕೂಡಲೇ ಈ ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು.
ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ!
- 1 ರಿಂದ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ 15,000
- ಆನಂತರ 7 ರಿಂದ 12ನೇ ತರಗತಿ ಡಿಪ್ಲೋಮಾ, ಐಟಿಐ ಓದುತ್ತಿರುವ ವಿದ್ಯಾರ್ಥಿಗಳಿಗೆ 18000 ಹಣ.
- ಆನಂತರ ಸಾಮಾನ್ಯ ಪದವಿ ಪೂರ್ವ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 30,000 ಹಣ.
- ವೃತ್ತಿಪರ ಪದವಿ ಕೋರ್ಸುಗಳ ವಿದ್ಯಾರ್ಥಿಗಳಿಗೆ ಈಗ 50,000 ಹಣ.
- ಸ್ನಾತಕೋತರ ಕೋರ್ಸ್ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 35,000 ಹಣ.
- ವೃತ್ತಿಪರ ಸ್ನಾತಕೋತರ ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ಹಣ.
ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಸರ್ಕಾರಿ ಖಾಸಗಿ ಹಾಗೂ ಸರ್ಕಾರ ಅನುದಾನಿತ ಶಾಲೆಗಳಲ್ಲಿ 1ರಿಂದ ಪಿಯುಸಿ, ಡಿಪ್ಲೋಮಾ, ಐಟಿಐ, ಪಾಲಿಟೆಕ್ನಿಕ್ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಹಾಗೆ ಈಗ ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಕಾಲೇಜು ಅಥವಾ ವಿಶ್ವವಿದ್ಯಾಲಯದಲ್ಲಿ ಸಾಮಾನ್ಯ ಕೋರ್ಸ್ಗಳಾದಂತಹ ಬಿಕಾಂ, ಬಿಸಿಎ, ಬಿಎ, ಬಿಎಸ್ಸಿ, ಬಿಟೆಕ್ ಹಾಗೂ ಎಂಬಿಬಿಎಸ್, ಎಲ್ ಎಲ್ ಬಿ, ನರ್ಸಿಂಗ್ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು.
ಅರ್ಜಿ ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರ
- ವೋಟರ್ ಐಡಿ
- ಚಾಲನಾ ಪರವಾನಿಗೆ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ಅನ್ನು ಬಳಕೆ ಮಾಡಿಕೊಂಡು ನೀವು ಅಪ್ಲೆ ನೌ ಬಟನ್ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ಕೇಳಿದಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
LINK : Apply Now