Pre Matric Scholarship: ಈಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ಸರ್ಕಾರ 2025 26ನೇ ಸಾಲಿಗೆ ಸೇರಿದಂತಹ ಅಲ್ಪಸಂಖ್ಯಾತ ಸಮುದಾಯದ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವಂತಹ ಹಿನ್ನೆಲೆಯಲ್ಲಿ ಈಗ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಈಗ ಸರ್ಕಾರೂ ಮುಂದಾಗಿದೆ. ಅದೇ ರೀತಿಯಾಗಿ ಈ ಒಂದು ಯೋಜನೆಯ ಬಡ ವಿದ್ಯಾರ್ಥಿಗಳ ಶಿಕ್ಷಣದ ಖರ್ಚನ್ನು ಕಡಿಮೆ ಮಾಡುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗಿದೆ.
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ಅಂದರೆ ಅರ್ಹತೆಗಳು ಏನು ಮತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿ ಸಲ್ಲಿಸುವ ವಿಧಾನ ಏನು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ವಿದ್ಯಾರ್ಥಿ ವೇತನದ ಮಾಹಿತಿ
ಈಗಾಗಲೇ ಸರ್ಕಾರವು ಈ ಒಂದು ಬಡ ವಿದ್ಯಾರ್ಥಿಗಳು ಅಂದರೆ ಕಡುಬಡತನದಲ್ಲಿರುವಂತಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈಗ ಅವರು ತಮ್ಮ ವಿದ್ಯಾಭ್ಯಾಸವನ್ನು ಸುಲಭವಾಗಿ ಮುಂದುವರಿಸಿಕೊಂಡು ಹೋಗುವ ಉದ್ದೇಶದಿಂದಾಗಿ ಈಗ ಹಲವಾರು ರೀತಿಯ ವಿದ್ಯಾರ್ಥಿ ವೇತನಗಳನ್ನು ಈಗಾಗಲೇ ಬಿಡುಗಡೆ ಮಾಡಿವೆ. ಅವುಗಳಲ್ಲಿ ಈಗ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಈಗ ನೀವು ಕೂಡ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಅರ್ಜಿದಾರರು 1ರಿಂದ 8ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು.
- ಆನಂತರ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯ 1 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಅರ್ಜಿದಾರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ವ್ಯಾಸಂಗ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವ ವಿಧಾನ ಏನು?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೊದಲು ನೀವು SSP ಪೋರ್ಟಲ್ ಗೆ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಹೊಸ ಖಾತೆಯನ್ನು ರಜಿಸ್ಟರ್ ಮಾಡಿಕೊಳ್ಳಬೇಕು.
- ತದನಂತರ ನೀವು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿದ ನಂತರ ನೀವು ನಿಮ್ಮ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್/ 30/ 2025
ಈಗ ಈ ಒಂದು ವಿದ್ಯಾರ್ಥಿ ವೇತನ ಬಡ ಕುಟುಂಬದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳ ಬಗ್ಗೆ ನೀವು ಏನಾದರೂ ಈಗ ಮಾಹಿತಿಗಳನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.